Select Your Language

Notifications

webdunia
webdunia
webdunia
webdunia

ಎರಡು ಗುಂಪುಗಳ ನಡುವೆ ಘರ್ಷಣೆ ; 5 ವರ್ಷದ ಬಾಲಕನ ಮೇಲೆ ಪ್ರಕರಣ ದಾಖಲಿಸಿದ ಪೊಲೀಸರು!

ಎರಡು ಗುಂಪುಗಳ ನಡುವೆ ಘರ್ಷಣೆ ; 5 ವರ್ಷದ ಬಾಲಕನ ಮೇಲೆ ಪ್ರಕರಣ ದಾಖಲಿಸಿದ ಪೊಲೀಸರು!
ಉತ್ತರಪ್ರದೇಶ , ಶನಿವಾರ, 29 ಸೆಪ್ಟಂಬರ್ 2018 (07:28 IST)
ಉತ್ತರ ಪ್ರದೇಶ : ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ 5 ವರ್ಷದ ಬಾಲಕನೊಬ್ಬ ಕಾರಣವೆಂದು ಆತನ ಮೇಲೆ ಪೊಲೀಸರು ಎಫ್.ಐ.ಆರ್ ದಾಖಲಿಸಿದ ಆಶ್ಚರ್ಯಕರ ಘಟನೆ ಉತ್ತರ ಪ್ರದೇಶದ ಶಾಮ್ಲಿ ಗ್ರಾಮದಲ್ಲಿ ನಡೆದಿದೆ.


5 ವರ್ಷದ ಬಾಲಕನೊಬ್ಬ ಎರಡು ಗುಂಪುಗಳ ನಡುವೆ ಗಲಾಟೆ ನಡೆಯಲು ಕಾರಣವಾಗಿದ್ದಲ್ಲದೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆಂಬ ಆರೋಪದ ಮೇಲೆ ಬಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ ಸೆಕ್ಸೆನ್) 326ರ ಅಡಿ ಪ್ರಕರಣ ದಾಖಲಿಸಿದ್ದಲ್ಲದೇ ಬಾಲಕನನ್ನು ಬಂಧಿಸಲು ಪೊಲೀಸರು ಆತನ ನಿವಾಸದ ಮೇಲೆ ಹಲವು ಬಾರಿ ದಾಳಿ ನಡೆಸಿದ್ದಾರೆ.


ಈ ಪ್ರಕರಣದಲ್ಲಿ ಪೊಲೀಸರ ಲೋಪ ಎದ್ದು ಕಾಣುತ್ತಿದ್ದ ಹಿನ್ನಲೆಯಲ್ಲಿ ಬಾಲಕನ ಪೋಷಕರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರದ ಮುಖಾಂತರ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.


ನಂತರ ಪೊಲೀಸರ ಈ ಕೃತ್ಯ ಬಹಿರಂಗವಾಗುತ್ತಿದ್ದಂತೆ ಮುಜುಗರಕ್ಕೀಡಾದ ಅಧಿಕಾರಿಗಳು ತಕ್ಷಣವೇ ಎಫ್‌ಐಆರ್‌ನಿಂದ ಬಾಲಕನ ಹೆಸರು ತೆಗೆದುಹಾಕಿದ್ದಾರೆ. ಅಲ್ಲದೇ ಪೊಲೀಸ್ ಠಾಣೆಯ ತನಿಖಾಧಿಕಾರಿ ಅನೂಪ್ ಕುಮಾರ್ ಹಾಗೂ ಇತರ ಪೊಲೀಸರಿಂದ ಈ ಬಗ್ಗೆ ಸ್ಪಷ್ಟನೆ ಕೂಡ ಕೇಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಗಳ ಖಾಸಗಿ ಅಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದನಂತೆ ನೀಚ ತಂದೆ