Select Your Language

Notifications

webdunia
webdunia
webdunia
webdunia

ನಕಲಿ ಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ತೆಲಗಿ ಸಾವು

ನಕಲಿ ಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ತೆಲಗಿ ಸಾವು
ಬೆಂಗಳೂರು , ಗುರುವಾರ, 26 ಅಕ್ಟೋಬರ್ 2017 (17:25 IST)
ಬೆಂಗಳೂರು: ನಕಲಿ ಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿ(56)ಮೃತಪಟ್ಟಿದ್ದಾನೆ.

ಬಹು ಅಂಗಾಂದ ವೈಫಲ್ಯದಿಂದ ಬಳಲುತ್ತಿದ್ದ ತೆಲಗಿ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

30 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ತೆಲಗಿ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ. ತೆಲಗಿ ಹೃದ್ರೋಗ ಹಾಗೂ ಮಧುಮೇಹ ಸಮಸ್ಯೆ, ಬಹು ಅಂಗಾಂಗ ವೈಫ‌ಲ್ಯದಿಂದ ಬಳಲುತ್ತಿದ್ದು, ಈತನಿಗೆ ಚಿಕಿತ್ಸೆ ನೀಡಲು ಹೈಕೋರ್ಟ್‌ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ 5 ದಿನದಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.

ಆತನ ಸ್ಥಿತಿ ಚಿಂತಾಜನಕವಾಗಿದ್ದ ಹಿನ್ನೆಲೆಯಲ್ಲಿ, ಐಸಿಯು ನಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 3:30ಕ್ಕೆ ಮೃತಪಟ್ಟಿರುವುದಾಗಿ ರಾಷ್ಟ್ರೀಯ ಸುದ್ದಿವಾಹಿನಿಗಳು ವರದಿ ಮಾಡಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ನಕಲಿ ಛಾಪಾ ಕಾಗದ: ಅಬ್ದುಲ್ ಕರೀಂ ಲಾಲ್ ತೆಲಗಿ ನಿಧನ