Select Your Language

Notifications

webdunia
webdunia
webdunia
webdunia

ಡಿಎಂಕೆಯಿಂದ ಅಮಾನತುಗೊಂಡಿದ್ದ ಡ್ಯಾನಿಶ್‌ ಅಲಿ ಕಾಂಗ್ರೆಸ್‌ಗೆ ಸೇರ್ಪಡೆ

Danish Ali

Sampriya

ನವದೆಹಲಿ , ಬುಧವಾರ, 20 ಮಾರ್ಚ್ 2024 (19:58 IST)
Photo Courtesy X
ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ ಬಹುಜನ ಸಮಾಜ ಪಕ್ಷದಿಂದ ಅಮಾನತುಗೊಂಡಿದ್ದ ಸಂಸದ ಡ್ಯಾನಿಶ್ ಅಲಿ  ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಮಾರ್ಚ್ 14ರಂದು ಡ್ಯಾನಿಶ್ ಅಲಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಮೂಲಕ ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಮೂನ್ಸೂಚನೆಯನ್ನು ನೀಡಿದ್ದರು.

ಡ್ಯಾನಿಶ್ ಅಲಿ ಅವರು ಉತ್ತರ ಪ್ರದೇಶದ ಅಮ್ರೋಹಾ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇವರು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ 2023ರ ಡಿಸೆಂಬರ್ 9ರಂದು  ಸಂಸದ ಡ್ಯಾನಿಶ್ ಅಲಿ ಅವರನ್ನು ಬಹುಜನ ಸಮಾಜ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಮೆದುಳಿನ ಶಸ್ತ್ರಚಿಕಿತ್ಸೆಗೊಳಗಾದ ಆಧ್ಯಾತ್ಮಿಕ ಗುರು ಜಗ್ಗಿ ವಾಸುದೇವ್