Select Your Language

Notifications

webdunia
webdunia
webdunia
webdunia

ಸುನಂದಾ ಪುಷ್ಕರ್ ನಿಗೂಢ ಸಾವು: ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಪಿಐಎಲ್ ವಜಾ

ಸುನಂದಾ ಪುಷ್ಕರ್ ನಿಗೂಢ ಸಾವು: ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಪಿಐಎಲ್ ವಜಾ
ನವದೆಹಲಿ , ಶುಕ್ರವಾರ, 27 ಅಕ್ಟೋಬರ್ 2017 (14:27 IST)
ನವದೆಹಲಿ: ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಪತ್ನಿ ಸುನಂದಾ ಪುಷ್ಕರ್‌ ನಿಗೂಢ ಸಾವು ಪ್ರಕರಣದ ಎಸ್ಐಟಿ ತನಿಖೆ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ನಡೆಸಬೇಕೆಂದು ಒತ್ತಾಯಿಸಿ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸ್ತಕಿ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾ ಮಾಡಿದೆ.

2014ರ ಜನವರಿ 17ರಂದು ದೆಹಲಿಯ ಪಂಚತಾರಾ ಹೋಟೆಲ್‌ ನಲ್ಲಿ ಸುನಂದಾ ಪುಷ್ಕರ್‌ ನಿಗೂಢ ಸಾವನ್ನಪ್ಪಿದ್ದರು. ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ನಡೆಸುತ್ತಿದ್ದು, ಇದು ಕೋರ್ಟ್‌ ಮೇಲ್ವಿಚಾರಣೆಯಲ್ಲಿ ನಡೆಯಬೇಕೆಂದು ಸುಬ್ರಮಣಿಯನ್‌ ಸ್ವಾಮಿ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿದ್ದರು.

ಅ.26 ರಂದು ನ್ಯಾಯಮೂರ್ತಿಗಳಾದ ಎಸ್‌.ಮುರಳೀಧರ್‌ ಮತ್ತು ಐ.ಎಸ್‌.ಮೆಹ್ತಾ ಅವರಿದ್ದ ನ್ಯಾಯಪೀಠ ಸುಬ್ರಮಣಿಯನ್ ಸ್ವಾಮಿಗೆ ಛೀಮಾರಿ ಹಾಕಿ, ಅರ್ಜಿಯನ್ನು ವಜಾಗೊಳಿಸಿದೆ. ರಾಜಕೀಯ ಉದ್ದೇಶದೊಂದಿಗೆ  ಈ ಪಿಐಎಲ್‌ ಹೂಡಲಾಗಿದೆ ಎಂದು ನ್ಯಾಯಪೀಠ ಕಿಡಿಕಾರಿದೆ. ಇದನ್ನು ಸಾರ್ವಜನಿಕ ಹಿತಾಸ್ತಕಿ ಅರ್ಜಿ ಎಂದು ಪರಿಗಣಿಸಲು ಸಾಧ್ಯವಿಲ್ಲ ನ್ಯಾಯಪೀಠ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ತಿಗೆ ಸ್ವಾಮೀಜಿ ಹನಿಟ್ರ್ಯಾಪ್ ಆರೋಪ: 4 ವರ್ಷದ ಹಿಂದಿನ ವಿಡಿಯೋ ರಿಲೀಸ್..?