Select Your Language

Notifications

webdunia
webdunia
webdunia
webdunia

ಭಾರತದ ಶ್ರೀಮಂತ ನಂ.1 ಶಾಸಕ ಯಾರು ಗೊತ್ತ?

ಭಾರತದ ಶ್ರೀಮಂತ ನಂ.1 ಶಾಸಕ ಯಾರು ಗೊತ್ತ?
ನವದೆಹಲಿ , ಶುಕ್ರವಾರ, 21 ಜುಲೈ 2023 (08:32 IST)
ನವದೆಹಲಿ : ಭಾರತದ ಅತ್ಯಂತ ಶ್ರೀಮಂತ ಶಾಸಕರ ಸಾಲಿನಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಂ.1 ಸ್ಥಾನವನ್ನು ಅಲಂಕರಿಸಿದ್ದಾರೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ಸಂಸ್ಥೆ ಬಿಡುಗಡೆ ಮಾಡಿರುವ ವರದಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ಭಾರತದ ಶ್ರೀಮಂತ ಶಾಸಕರ ಪಟ್ಟಿಯನ್ನು ಸಂಸ್ಥೆ ಬಿಡುಗಡೆ ಮಾಡಿದ್ದು, ಅದರಲ್ಲಿ ಟಾಪ್ 10 ಶ್ರೀಮಂತ ಶಾಸಕರನ್ನು ಹೈಲೇಟ್ ಮಾಡಿದೆ. ಪಟ್ಟಿಯಲ್ಲಿ ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಮೊದಲ ಸ್ಥಾನದಲ್ಲಿದ್ದು, ಭಾರತದ ಅತ್ಯಂತ ಶ್ರೀಮಂತ ಶಾಸಕರೆನಿಸಿದ್ದಾರೆ. 

ಈಚೆಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಡಿ.ಕೆ. ಶಿವಕುಮಾರ್ ಭಾರೀ ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದರು. ಅವರು ಒಟ್ಟು ಆಸ್ತಿ 1,413 ಕೋಟಿ ರೂ. ಇದೆ ಎಂದು ವರದಿ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು