Select Your Language

Notifications

webdunia
webdunia
webdunia
webdunia

ಕಾರಿನಲ್ಲಿ ಸೆಕ್ಸ್ ಮಾಡಲು ನಿರಾಕರಿಸಿದ್ದ ಪ್ರಿಯಕರನ ಮರ್ಮಾಂಗವನ್ನು ಕತ್ತರಿಸಿದ ಪ್ರೇಯಸಿ

ಕಾರಿನಲ್ಲಿ ಸೆಕ್ಸ್ ಮಾಡಲು ನಿರಾಕರಿಸಿದ್ದ ಪ್ರಿಯಕರನ ಮರ್ಮಾಂಗವನ್ನು ಕತ್ತರಿಸಿದ ಪ್ರೇಯಸಿ
ಭೋಪಾಲ್ , ಶನಿವಾರ, 24 ನವೆಂಬರ್ 2018 (06:43 IST)
ಭೋಪಾಲ್ : ಯುವತಿಯೊಬ್ಬಳು  ಕಾರಿನಲ್ಲಿ ಸೆಕ್ಸ್ ಮಾಡಲು ನಿರಾಕರಿಸಿದ್ದ ಪ್ರಿಯಕರನ ಮರ್ಮಾಂಗವನ್ನು ಕತ್ತರಿಸಿರುವ ಘಟನೆ ಮಧ್ಯಪ್ರದೇಶದ ಅನುಪಪುರ್ ನಲ್ಲಿ ನಡೆದಿದೆ.


ಅಜಯ್ ಹಲ್ಲೆಗೊಳಗಾದ ಯುವಕನಾಗಿದ್ದು, ಈತ ಹಾಗೂ ಯುವತಿ ಸುಮಾರು 12-14 ವರ್ಷಗಳಿಂದ ಇಬ್ಬರೂ ಅಕ್ರಮ ಸಂಬಂಧದಲ್ಲಿದ್ದು, ಇಬ್ಬರಿಗೂ ಬೇರೆಯವರ ಜೊತೆ ಮದುವೆಯಾಗಿದ್ದರಿಂದ ಇಬ್ಬರು ಕದ್ದುಮುಚ್ಚಿ ಭೇಟಿಯಾಗುತ್ತಿದ್ದರು
ಆ ವೇಳೆ ಯುವತಿ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಲು ಹೇಳಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾಳೆ. ಇದಕ್ಕೆ ಅಜಯ್ ಒಪ್ಪದಿದ್ದಾಗ ಕೋಪಗೊಂಡ ಆಕೆ ಚಾಕುವಿನಿಂದ ಆತನ ಮರ್ಮಾಂಗವನ್ನು ಕತ್ತರಿಸಿದ್ದಾಳೆ.


ಸದ್ಯಕ್ಕೆ ಕೋಟ್ಮಾ ಕೊಲಿಯರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಜಯ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ಅಜಯ್ ದೂರಿನ ಮೇಲೆ ಆರೋಪಿ ಯುವತಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆಕೆ ಕಾರು ಹತ್ತುವಾಗಲೇ ಚಾಕುವನ್ನು ಬ್ಯಾಗಿನಲ್ಲಿ ತಂದಿದ್ದಳು ಎಂದು ವರದಿಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಗೆ ಅಡ್ಡಿ: ಪೊಲೀಸ್ ಠಾಣೆ ಮೆಟ್ಟಿಲೇರಿದ ಹುಡುಗಿ