Select Your Language

Notifications

webdunia
webdunia
webdunia
webdunia

ಮಣಿಪುರದಲ್ಲಿ ಭಾರೀ ಮಳೆ ಸಾಧ್ಯತೆ: ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ

ಮಣಿಪುರದಲ್ಲಿ ಭಾರೀ ಮಳೆ ಸಾಧ್ಯತೆ: ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ

Sampriya

ಇಂಫಾಲ್‌ , ಸೋಮವಾರ, 6 ಮೇ 2024 (14:47 IST)
ಇಂಫಾಲ್‌: ಮಣಿಪುರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದೆ.

ರಾಜ್ಯದಲ್ಲಿ ಭಾನುವಾರ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ಇಂಫಾಲ್‌ನ ಪಶ್ಚಿಮ ಜಿಲ್ಲೆಗಳಾದ ಕಾಂಚೀಪುರ ಮತ್ತು ತೇರಾ ಮತ್ತು ತೌಬಾಲ್‌ನ ವಿವಿಧ ಭಾಗಗಳಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಸೋಮವಾರ ಮತ್ತು ಮಂಗಳವಾರ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪ್ರಸ್ತುತ ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎಲ್ಲರೂ ಮನೆಯಲ್ಲೇ ಇದ್ದು ಸುರಕ್ಷಿತವಾಗಿರುವಂತೆ ನಾನು ಮನವಿ ಮಾಡುತ್ತೇನೆ ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಊಟ ಹಾಕಲು ಟೈಂ ಫಿಕ್ಸ್