Select Your Language

Notifications

webdunia
webdunia
webdunia
webdunia

ಒಂದೇ ದಿನ, 2 ಸ್ಥಳದಲ್ಲಿ ಒಬ್ಬ ಯುವತಿಯ ಮೇಲೆ 10 ಜನ ಕಾಮುಕರಿಂದ ಸಾಮೂಹಿಕ ಅತ್ಯಾಚಾರ

ಒಂದೇ ದಿನ, 2 ಸ್ಥಳದಲ್ಲಿ ಒಬ್ಬ ಯುವತಿಯ ಮೇಲೆ 10 ಜನ ಕಾಮುಕರಿಂದ ಸಾಮೂಹಿಕ ಅತ್ಯಾಚಾರ
ಚಂಡೀಘಡ , ಮಂಗಳವಾರ, 16 ಅಕ್ಟೋಬರ್ 2018 (07:24 IST)
ಚಂಡೀಗಢ : 24 ವರ್ಷದ ಯುವತಿಯೊಬ್ಬಳ ಮೇಲೆ ಒಂದೇ ದಿನ ಎರಡು ಸ್ಥಳದಲ್ಲಿ 10 ಜನ ಕಾಮುಕರು ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ನಡೆದಿದೆ.


ಅಕ್ಟೋಬರ್ 10 ರಂದು ಯುವತಿಯ ಸ್ನೇಹಿತ ಸೇರಿ ಒಟ್ಟು ಆರು ಜನರು ಸಂತ್ರಸ್ತೆಯನ್ನು ಸಮೀಪದ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ನಂತರ ಅಲ್ಲಿಂದ ತಪ್ಪಿಸಿಕೊಂಡು ಬಂದ ಯುವತಿ ತನ್ನ ಪರಿಚಯಸ್ಥರೊಬ್ಬರ ಮನೆಯಲ್ಲಿ ಆಶ್ರಯ ಪಡೆದಿದ್ದಾಳೆ. ಆದರೆ ಆತ ತನ್ನ ಮೂವರು ಸ್ನೇಹಿತರ ಜೊತೆ ಸೇರಿ ಮತ್ತೆ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸುಭಾನ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯನ್ನು ಸ್ಥಳೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ದೃಢವಾಗಿದೆ. ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅತ್ಯಾಚಾರ ಎಸಗಿದ 10 ಮಂದಿ ಆರೋಪಿಗಳಲ್ಲಿ ನಾಲ್ವರನ್ನು ಬಂಧಿಸಿದ ಪೊಲೀಸರು , ಉಳಿದವರಿಗಾಗಿ ಬಲೆ ಬೀಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅನಿತಾ ಕುಮಾರಸ್ವಾಮಿ ಬಳಿ ಇರುವ ಆಸ್ತಿ ಎಷ್ಟು ಗೊತ್ತಾ?