Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕನನ್ನು ಹೊಗಳಿದ ರಾಹುಲ್ ಗಾಂಧಿ

ಬಿಜೆಪಿ ನಾಯಕನನ್ನು ಹೊಗಳಿದ ರಾಹುಲ್ ಗಾಂಧಿ
ನವದೆಹಲಿ , ಮಂಗಳವಾರ, 5 ಫೆಬ್ರವರಿ 2019 (09:12 IST)
ನವದೆಹಲಿ : ಪ್ರಧಾನಿ ಮೋದಿಗೆ ಪರೋಕ್ಷವಾಗಿ ಟಾಂಗ್ ನೀಡಿದ ಬಿಜೆಪಿಯ ನಾಯಕ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿಯವರ ಕಾರ್ಯವೈಖರಿಯನ್ನು ಹೊಗಳಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ  ಟ್ವೀಟ್ ಮಾಡಿದ್ದಾರೆ.

ಭಾನುವಾರ ನಾಗ್ಪುರದಲ್ಲಿ ಮಾತನಾಡಿದ ಸಚಿವ ನಿತಿನ್ ಗಡ್ಕರಿ ಅವರು, ಮನೆಯನ್ನು ಸರಿಯಾಗಿ ನೋಡಿಕೊಳ್ಳದವರು ದೇಶವನ್ನು ನೋಡಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಬಿಜೆಪಿ ಪಕ್ಷದ ಕಾರ್ಯಕರ್ತರು ತಮ್ಮ ಜವಾಬ್ದಾರಿಗಳನ್ನು ಅರಿತು ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗಿದೆ’ ಎಂದು ಪರೋಕ್ಷವಾಗಿ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದರು.

 

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ,’ ಗಡ್ಕರಿ ಜಿ, ನಿಮಗೆ ಧನ್ಯವಾದಗಳು. ಬಿಜೆಪಿಯಲ್ಲಿ ಗಟ್ಸ್ ಇರೋ ಏಕೈಕ ವ್ಯಕ್ತಿ ಎಂದರೇ ನೀವು ಮಾತ್ರ. ದಯಮಾಡಿ ರಫೇಲ್ ಹಗರಣ, ಅನಿಲ್ ಅಂಬಾನಿ, ರೈತರ ಸಂಕಷ್ಟ ಹಾಗೂ ಕೇಂದ್ರೀಯ ಸಂಸ್ಥೆಗಳ ನಾಶದ ಬಗ್ಗೆಯೂ ಮಾತನಾಡಿ’ ಎಂದು ಬರೆದು ನಿತಿನ್ ಗಡ್ಕರಿ ಅವರಿಗೆ  ಟ್ಯಾಗ್ ಮಾಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈಗಿನ ಕನಕದಾಸರು ಎಂದ ಮಾಜಿ ಸಚಿವ