Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿಗೆ ಟಾಂಗ್ ನೀಡಿದ ರಮ್ಯಾ!

ಪ್ರಧಾನಿ ಮೋದಿಗೆ ಟಾಂಗ್ ನೀಡಿದ ರಮ್ಯಾ!
ನವದೆಹಲಿ , ಬುಧವಾರ, 12 ಡಿಸೆಂಬರ್ 2018 (13:55 IST)
ನವದೆಹಲಿ: ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಬಂದಿದೆ. ಇದರಲ್ಲಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.


ಈ ಮಧ್ಯೆ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ  ಪ್ರಧಾನಿ ಮೋದಿಗೆ ಟಾಂಗ್‌ ನೀಡಿದ್ದು, ಬಿಜೆಪಿ ಮುಕ್ತ ಭಾರತ ಎಂದು ಫೋಟೋ ಪೋಸ್ಟ್‌ ಮಾಡಿದ್ದಾರೆ.


2013 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅವರು ಮಾಡಿದ್ದ ಟ್ವೀಟ್‌ನ ಪ್ರಿಂಟ್‌ಸ್ಕ್ರೀನ್‌ ತೆಗೆದು ಕಾಂಗ್ರೆಸ್‌ ಮುಕ್ತ ಭಾರತ ಎಂದಿದ್ದಲ್ಲಿ ಕಾಂಗ್ರೆಸ್‌ ಹೆಸರನ್ನು  ಅಳಿಸಿ ಕೇಸರಿ ಬಣ್ಣದಲ್ಲಿ ಬಿಜೆಪಿ ಎಂದು ಬರೆದಿದ್ದಾರೆ.


ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಖಂಡ ಮತ್ತು ಮಣಿಪುರ ರಾಜ್ಯಗಳಲ್ಲಿ ಬಿಜೆಪಿ ಅಲೆ ಕಾಣುತ್ತಿದೆ. ಇದು ಕಾಂಗ್ರೆಸ್ ಮುಕ್ತ ಭಾರತದ ಆರಂಭ: ನರೇಂದ್ರ ಮೋದಿ ಎಂದು ಬರೆದು ಟ್ವೀಟ್ ಮಾಡಲಾಗಿತ್ತು.


ರಮ್ಯಾ ಅದೇ ಟ್ವೀಟ್‍ನ ಫೋಟೋವನ್ನು ಎಡಿಟ್ ಮಾಡಿ ಕಾಂಗ್ರೆಸ್ ಪದದ ಮೇಲೆ ಗೆರೆ ಹಾಕಿ ಇದು ಬಿಜೆಪಿ ಮುಕ್ತ ಭಾರತದ ಆರಂಭ ಎಂದು ತಮ್ಮ ಟ್ವೀಟರ್ ನಲ್ಲಿ ಹಾಕಿಕೊಳ್ಳುವ ಮೂಲಕ ಮೋದಿಗೆ ತಿರುಗೇಟು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಶಿವರಾಜ್ ಸಿಂಗ್ ಚೌಹಾಣ್