Select Your Language

Notifications

webdunia
webdunia
webdunia
webdunia

ಸಿದ್ದಗಂಗಾ ಶ್ರೀಗಳು ಬೇಗ ಗುಣಮುಖರಾಗಲಿ- ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್

ಸಿದ್ದಗಂಗಾ ಶ್ರೀಗಳು ಬೇಗ ಗುಣಮುಖರಾಗಲಿ- ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್
ನವದೆಹಲಿ , ಶುಕ್ರವಾರ, 18 ಜನವರಿ 2019 (10:16 IST)
ನವದೆಹಲಿ : ಸಿದ್ದಗಂಗಾ ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ ಮಾಡಿ ಪ್ರಾರ್ಥಿಸಿದ್ದಾರೆ.


ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಟ್ವೀಟ್ ಮಾಡಿ,ಪರಮಪೂಜ್ಯ ಡಾಕ್ಟರ್ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳವರದು ಅಮೋಘ ವ್ಯಕ್ತಿತ್ವ. ಅವರ ಮಹೋನ್ನತ ಸೇವೆ ಕೋಟ್ಯಾಂತರ ಜನರ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ. ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಹಾಗೂ ದೇವರು ಅವರಿಗೆ ಉತ್ತಮ ಆರೋಗ್ಯ ಕರುಣಿಸಲೆಂದು ಇಡೀ ರಾಷ್ಟ್ರ ಪ್ರಾರ್ಥಿಸುತ್ತಿದೆ ಎಂದು ತಿಳಿಸಿದ್ದಾರೆ.


ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಚಿಕಿತ್ಸೆ ಮುಂದುವರೆದಿದೆ. ಹಳೇ ಮಠದಲ್ಲೇ ಸ್ವಾಮೀಜಿಗಳೀಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸ್ವಲ್ಪ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ ಆಪರೇಷನ್ ಕಮಲಕ್ಕೆ ಕೈ ಹಾಕಲು ಕಾರಣವೇ ಇವರಂತೆ