Select Your Language

Notifications

webdunia
webdunia
webdunia
webdunia

ಸುಪ್ರೀಂಕೋರ್ಟ್ ನಲ್ಲಿ ಇಂದು ಮತ್ತೊಂದು ಮಹಾ ತೀರ್ಪು

ಸುಪ್ರೀಂಕೋರ್ಟ್ ನಲ್ಲಿ ಇಂದು ಮತ್ತೊಂದು ಮಹಾ ತೀರ್ಪು
ನವದೆಹಲಿ , ಶುಕ್ರವಾರ, 28 ಸೆಪ್ಟಂಬರ್ 2018 (09:08 IST)
ನವದೆಹಲಿ: ಕಳೆದ ಎರಡು ದಿನಗಳಿಂದ ದೇಶದ ಜನತೆ ಸುಪ್ರೀಂಕೋರ್ಟ್ ನೀಡುವ ತೀರ್ಪುಗಳತ್ತ ಕಾತರದಿಂದ ಎದುರು ನೋಡುವಂತಾಗಿದೆ. ಇಂದು ಮತ್ತೊಂದು ಮಹತ್ವದ ತೀರ್ಪು ನೀಡಲು ನ್ಯಾ. ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಸಜ್ಜಾಗಿದೆ.

ಶಬರಿಮಲೆ ದೇಗುಲಕ್ಕೆ ಮಹಿಳೆಯರು ಪ್ರವೇಶಿಸಬೇಕೋ ಬೇಡವೋ ಎಂಬ ಬಗ್ಗೆ ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ತೀರ್ಪು ಹೊರಬೀಳಲಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಲಿದೆ.

ಅಲ್ಲದೆ, ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣ ಮತ್ತು ಪ್ರಧಾನಿ ಮೋದಿ ಹತ್ಯೆ ಸಂಚು ಆರೋಪದಲ್ಲಿ ಐವರು ಹೋರಾಟಗಾರರನ್ನು ಬಂಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಲಿದೆ. ಹೀಗಾಗಿ ಇಂದು ಮತ್ತೊಮ್ಮೆ ಸುಪ್ರೀಂಕೋರ್ಟ್ ತೀರ್ಪಿನತ್ತ ಎಲ್ಲರ ದೃಷ್ಟಿ ನೆಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಮೇಲೆ ಕಾಂಗ್ರೆಸ್ ಗೆ ರಾಫೆಲ್ ಕಳಂಕ ಮೆತ್ತಲು ಸಾಧ್ಯವಾಗದು!