Select Your Language

Notifications

webdunia
webdunia
webdunia
webdunia

ಜಿಎಸ್‌ಟಿ ನಿರೀಕ್ಷೆ: ಕುಸಿದ ಶೇರುಪೇಟೆ ಸಂವೇದಿ ಸೂಚ್ಯಂಕ

ಜಿಎಸ್‌ಟಿ ನಿರೀಕ್ಷೆ: ಕುಸಿದ ಶೇರುಪೇಟೆ ಸಂವೇದಿ ಸೂಚ್ಯಂಕ
ಮುಂಬೈ , ಬುಧವಾರ, 3 ಆಗಸ್ಟ್ 2016 (13:21 IST)
ರಾಜ್ಯಸಭೆಯಲ್ಲಿ ಇಂದು ಸಂಜೆ ಜಿಎಸ್‌ಟಿ ಮಸೂದೆ ಕುರಿತಂತೆ ಚರ್ಚೆಯಾಗಲಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 109 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 226.89 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 108.55 ಪಾಯಿಂಟ್‌ಗಳ ಇಳಿಕೆ ಕಂಡು 27,873.16 ಅಂಕಗಳಿಗೆ ತಲುಪಿದೆ.
 
ಎಫ್‌ಎಂಸಿಜಿ, ತೈಲ ಮತ್ತು ಅನಿಲ, ರಿಯಲ್ಟಿ, ವಿದ್ಯುತ್, ಮೂಲಸೌಕರ್ಯ, ಬ್ಯಾಂಕಿಂಗ್ ಮತ್ತು ಹೆಲ್ತ್‌ಕೇರ್ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಶೇ.0.60 ರಷ್ಟು ನಷ್ಟ ಅನುಭವಿಸಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 36.30 ಪಾಯಿಂಟ್‌ಗಳ ಕುಸಿತ ಕಂಡು 8,586.60 ಅಂಕಗಳಿಗೆ ತಲುಪಿದೆ. 
 
ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟು ಮತ್ತು ಜಿಎಸ್‌ಟಿ ಮಸೂದೆ ಚರ್ಚೆ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.86 ರಷ್ಟು ಇಳಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.70 ರಷ್ಟು ಇಳಿಕೆಯಾಗಿದೆ. ಆದರೆ, ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.04 ರಷ್ಟು ಚೇತರಿಕೆ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.49 ರಷ್ಟು ಕುಸಿತ ಕಂಡಿದೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್ ಸಿಎಂ ಆಯ್ಕೆ : ಬಿಜೆಪಿಗೆ ಆರ್‌ಎಸ್ಎಸ್‌ ಸಲಹೆ ಏನು?