Select Your Language

Notifications

webdunia
webdunia
webdunia
webdunia

ಜಿಎಸ್‌ಟಿ ನಿರೀಕ್ಷೆಯಲ್ಲಿ ಕುಸಿದ ಶೇರುಪೇಟೆ ಸಂವೇದಿ ಸೂಚ್ಯಂಕ

ಜಿಎಸ್‌ಟಿ ನಿರೀಕ್ಷೆಯಲ್ಲಿ ಕುಸಿದ ಶೇರುಪೇಟೆ ಸಂವೇದಿ ಸೂಚ್ಯಂಕ
ಮುಂಬೈ , ಮಂಗಳವಾರ, 2 ಆಗಸ್ಟ್ 2016 (18:18 IST)
ಯುರೋಪ್ ಮಾರುಕಟ್ಟೆಗಳ ದುರ್ಬಲ ವಹಿವಾಟು ಮತ್ತು ಜಿಎಸ್‌ಟಿ ಮಸೂದೆ ನಾಳೆ ಅಂಗೀಕಾರವಾಗುವ ನಿರೀಕ್ಷೆಗಳ ಹಿನ್ನೆಲೆಯಲ್ಲಿ, ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 21 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 205.48 ಪಾಯಿಂಟ್‌ಗಳ ಕುಸಿತಂ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 21.41 ಪಾಯಿಂಟ್‌ಗಳ ಕುಸಿತ ಕಂಡು 27,981.71 ಅಂಕಗಳಿಗೆ ತಲುಪಿದೆ.  
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 13.65 ಪಾಯಿಂಟ್‌ಗಳ ಕುಸಿತ ಕಂಡು 8,622.90 ಅಂಕಗಳಿಗೆ ತಲುಪಿದೆ.
 
ಟಾಟಾ ಮೋಟಾರ್ಸ್, ಎಚ್‌ಡಿಎಫ್‌ಸಿ, ಆದಾನಿ ಪೋರ್ಟ್ಸ್, ಭಾರ್ತಿ ಏರ್‌ಟೆಲ್, ಐಸಿಐಸಿಐ ಬ್ಯಾಂಕ್, ಗೇಲ್, ವಿಪ್ರೋ, ಸಿಪ್ಲಾ, ಲುಪಿನ್, ಕೋಲ್ ಇಂಡಿಯಾ, ಸನ್‌ ಫಾರ್ಮಾ ಮತ್ತು ಟಾಟಾ ಸ್ಟೀಲ್ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.
 
ಏತನ್ಮದ್ಯೆ, ಐಟಿಸಿ, ಮಾರುತಿ ಸುಜುಕಿ, ಎಸ್‌ಬಿಐ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ. 
 
ಜಪಾನ್‌ ಮತ್ತು ಸಿಂಗಾಪೂರ್ ಶೇರುಪೇಟೆಗಳು ವಹಿವಾಟಿನ ಮುಕ್ತಾಯಕ್ಕೆ ಶೇ 1.47 ರಷ್ಟು ಕುಸಿತ ಕಂಡಿದ್ದರೆ, ನಿಡಾ ಚಂಡುಮಾರುತದಿಂದಾಗಿ ಹಾಂಗ್‌ಕಾಂಗ್‌ ಶೇರುಪೇಟೆಗೆ ರಜೆ ಘೋಷಿಸಲಾಗಿದೆ. 
 
ಯುರೋಪ್, ಫ್ರಾನ್ಸ್, ಜರ್ಮನಿ ಮತ್ತು ಯುಕೆ ಮೂಲದ ಶೇರುಪೇಟೆಗಳು ವಹಿವಾಟಿನ ಮುಕ್ತಾಯಕ್ಕೆ ಶೇ.1.42 ರಷ್ಟು ಇಳಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪಶ್ಚಿಮ ಬಂಗಾಳಕ್ಕೆ ಮರುನಾಮಕರಣ: ಆಂಗ್ಲ ಭಾಷೆಯಲ್ಲಿ ಬೆಂಗಾಲ್, ಬಂಗಾಲಿಯಲ್ಲಿ ಬಂಗಾ