Select Your Language

Notifications

webdunia
webdunia
webdunia
webdunia

6.5 ಕೋಟಿ ಕನ್ನಡಿಗರ ಹಂಗಿನಲ್ಲಿ ಇಲ್ಲ, ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ: ಸಿಎಂ ಕುಮಾರಸ್ವಾಮಿ ವಿವಾದಿತ ಹೇಳಿಕೆ

6.5 ಕೋಟಿ ಕನ್ನಡಿಗರ ಹಂಗಿನಲ್ಲಿ ಇಲ್ಲ, ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ: ಸಿಎಂ ಕುಮಾರಸ್ವಾಮಿ ವಿವಾದಿತ ಹೇಳಿಕೆ
ಬೆಂಗಳೂರು , ಸೋಮವಾರ, 28 ಮೇ 2018 (08:52 IST)
ಬೆಂಗಳೂರು: ರಾಜ್ಯದ ಜನತೆ ನನಗೆ ಬಹುಮತ ನೀಡಿಲ್ಲ. ಹಾಗಾಗಿ 6.5 ಕೋಟಿ ಜನರ ಹಂಗಿನಲ್ಲಿ ಇಲ್ಲ. ಬದಲಿಗೆ ನನಗೆ ಬಹುಮತ ಬಾರದಿದ್ದರೂ ಬೆಂಬಲ ನೀಡಿದ ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ವಿವಾದಿತ ಹೇಳಿಕೆಯೊಂದನ್ನು ನೀಡಿದ್ದಾರೆ.

ಅವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಒಬ್ಬ ಮುಖ್ಯಮಂತ್ರಿಯಾಗಿ ಅವರು ಈ ರೀತಿ ಹೇಳಿಕೆ ನೀಡಬಾರದಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಮಾಜಿ ಪ್ರಧಾನಿ ಜವಹರಲಾಲ್ ನೆಹರೂ ಅವರ ಪುಣ್ಯತಿಥಿಯ ಅಂಗವಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ರೈತರ ಸಾಲಮನ್ನಾ ವಿಚಾರದಲ್ಲಿ ನಾನು ಈಗಲೂ ಅಂದು ಆಡಿದ ಮಾತಿಗೆ ಬದ್ಧ. ಅದಕ್ಕೆ ಸ್ವಲ್ಪ ಸಮಯಾವಕಾಶ ಬೇಕಾಗುತ್ತದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾರು ಅಪಘಾತದಲ್ಲಿ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದುನ್ಯಾಮಗೌಡ ನಿಧನ