ಖಾತೆ ಹಂಚಿಕೆ ಗೊಂದಲ ಪರಿಹಾರಕ್ಕೆ ದೇವೇಗೌಡರ ಮೊರೆ ಹೋದ ಸಿಎಂ ಎಚ್ ಡಿಕೆ

ಸೋಮವಾರ, 28 ಮೇ 2018 (09:14 IST)
ಬೆಂಗಳೂರು: ಅತ್ತ ಕಾಂಗ್ರೆಸ್ ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿರುವುದಲ್ಲದೆ, ಸಚಿವರ ಪಟ್ಟಿಯನ್ನೂ ಅಂತಿಮಗೊಳಿಸದೆ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷ ಜೆಡಿಎಸ್ ಗೆ ತಲೆನೋವಾಗಿದೆ.

ಸಿಎಂ ಹುದ್ದೆ ಬಿಟ್ಟುಕೊಟ್ಟ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿದೆ ಎನ್ನಲಾಗಿದೆ. ಆದರೆ ಜೆಡಿಎಸ್ ಕೂಡಾ ಪ್ರಮುಖ ಖಾತೆಗಳನ್ನು ಬಿಟ್ಟುಕೊಡಲು ತಯಾರಿಲ್ಲ. ಇದರಿಂದಾಗಿ ಖಾತೆ ಹಂಚಿಕೆ ಕಗ್ಗಂಟಾಗಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಹಾಗೂ ತಮ್ಮ ತಂದೆ ದೇವೇಗೌಡರನ್ನು ಭೇಟಿಯಾಗಿ ನಿನ್ನೆ ರಾತ್ರಿ ಸುಮಾರು 2 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಖಾತೆ ಹಂಚಿಕೆ ಕುರಿತಂತೆ ದೇವೇಗೌಡರ ಸಲಹೆ ಪಡೆದಿದ್ದಾರೆ. ಇಂದು ಕುಮಾರಸ್ವಾಮಿ ದೆಹಲಿಗೆ ತೆರಳಿ ಪ್ರಧಾನಿ ಮೋದಿ ಭೇಟಿಯಾಗುವ ಕಾರ್ಯಕ್ರಮವಿದೆಯಾದರೂ ಈ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್‍ ಜತೆ ಚರ್ಚೆ ನಡೆಸುವ ಸಾಧ್ಯತೆ ಕಡಿಮೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

ಮುಂದಿನ ಸುದ್ದಿ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಅಡ್ಡಿಯಾಗಿರುವ ನೈಜ ಕಾರಣವೇನು ಗೊತ್ತಾ?