Select Your Language

Notifications

webdunia
webdunia
webdunia
webdunia

ಮಹಾ ಮೈತ್ರಿಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಮೀಟಿಂಗ್

ಮಹಾ ಮೈತ್ರಿಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಮೀಟಿಂಗ್
ನವದೆಹಲಿ , ಸೋಮವಾರ, 24 ಸೆಪ್ಟಂಬರ್ 2018 (09:02 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಇಂದು ನವದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಿದೆ.

ಈ ಸಭೆಯಲ್ಲಿ ರಾಜ್ಯದಿಂದ ಸಿದ್ದರಾಮಯ್ಯ, ಕೆ ಸಿ ವೇಣುಗೋಪಾಲ್, ದಿನೇಶ್ ಗುಂಡೂರಾವ್ ಭಾಗವಹಿಸಲಿದ್ದಾರೆ. ಇನ್ನು, ದೇಶದ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ನಾಯಕರೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಗೆ ಯಾವ ಪಕ್ಷಗಳ ಜತೆ ಮೈತ್ರಿ ನಡೆಸಬೇಕು ಎಂಬುದು ಈ ಸಭೆಯಲ್ಲಿ ಚರ್ಚೆಯಾಗಲಿದೆ. ಈ ನಡುವೆ ರಾಜ್ಯ ಕಾಂಗ್ರೆಸ್ ನಾಯಕರು ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ರಾಹುಲ್ ಗೆ ಇದೇ ಸಂದರ್ಭದಲ್ಲಿ ವಿವರಣೆ ನೀಡಲಿದ್ದಾರೆ. ಅಲ್ಲದೆ, ಸಚಿವ ಸಂಪುಟ ವಿಸ್ತರಣೆ ಕುರಿತೂ ಚರ್ಚೆ ನಡೆಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಸೆಕ್ಸ್ ಗೆ ನಿರಾಕರಿಸಿದ್ದೇ ಈಕೆಯ ಪಾಲಿಗೆ ಮುಳುವಾಯಿತು!