Select Your Language

Notifications

webdunia
webdunia
webdunia
webdunia

ಪಾರ್ಕ್ ನಲ್ಲಿ ವಾಕ್ ಮಾಡುತ್ತಿದ್ದ ಮಹಿಳೆಯ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಾಡಿದ್ದೇನು ಗೊತ್ತಾ?

ಪಾರ್ಕ್ ನಲ್ಲಿ ವಾಕ್ ಮಾಡುತ್ತಿದ್ದ ಮಹಿಳೆಯ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಾಡಿದ್ದೇನು ಗೊತ್ತಾ?
ನವದೆಹಲಿ , ಮಂಗಳವಾರ, 25 ಸೆಪ್ಟಂಬರ್ 2018 (08:02 IST)
ನವದೆಹಲಿ : ದೆಹಲಿಯ ಪಾರ್ಕ್ ವೊಂದರಲ್ಲಿ ವಾಕ್ ಮಾಡುತ್ತಿದ್ದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ವಿಚಾರವನ್ನು ಆ ಮಹಿಳೆ ಫೇಸ್ ಬುಕ್ ಮೂಲಕ ಬಹಿರಂಗಪಡಿಸಿದ್ದಾಳೆ.


ಈ ಮಹಿಳೆ ಲಂಡನ್ ನಲ್ಲಿ ಎಲ್ ಎಲ್ ಬಿ ಮುಗಿಸಿ ಬಂದು ದೆಹಲಿಯಲ್ಲಿ ವಕೀಲ ವೃತ್ತಿ ಮಾಡುತ್ತಿದ್ದಳಂತೆ. ಸೆಪ್ಟೆಂಬರ್ 21 ರಂದು ಮಹಿಳೆ ಕೈಲಾಶ್ ಹಿಲ್ಸ್ ಸೆಂಟ್ರಲ್ ಪಾರ್ಕ್ ನಲ್ಲಿ ವಾಕ್ ಮಾಡುತ್ತಿರುವಾಗ  ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದನಂತೆ.


ಧೈರ್ಯದಿಂದ ತನ್ನನ್ನು ತಾನು ಕಾಪಾಡಿಕೊಂಡ ಮಹಿಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆತನ ಬೆನ್ನು ಬಿಡದೆ ಹಿಂಬಾಲಿಸಿ ವಿಡಿಯೋ ಮಾಡಿದ್ದಾಳಂತೆ. ಇದನ್ನು ಪೊಲೀಸರಿಗೆ ನೀಡಿದ್ರೆ ದೂರು ದಾಖಲಿಸಿಕೊಳ್ಳದೆ ಗಂಟೆಗಟ್ಟಲೆ ಕಾಯಿಸಿದ್ದಾರಂತೆ. ಆಗ ಆ ಮಹಿಳೆ ಫೇಸ್ ಬುಕ್ ಮೂಲಕ ಈ ವಿಚಾರವನ್ನು ತಿಳಿಸಿದ್ದಾಳೆ. ಇದೀಗ ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ಹುಡುಗಿಯರ ಮೇಲೆ ಕಾಮದಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸದೆ ನಿರ್ಲಕ್ಷ್ಯ ತೋರಿದ ಪೊಲೀಸರು