Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?

ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
ನವದೆಹಲಿ , ಸೋಮವಾರ, 16 ಜುಲೈ 2018 (14:36 IST)
ನವದೆಹಲಿ : ಮಹಿಳಾ ಮೀಸಲಾತಿ ಕುರಿತಾಗಿ  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.


ಜುಲೈ 18 ರಿಂದ ಮುಂಗಾರು ಅಧಿವೇಶನ ಆರಂಭಗೊಂಡು ಆಗಸ್ಟ್ 10 ರಂದು ಅಂತ್ಯಗೊಳ್ಳಲಿದೆ. ಈ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವಂತೆ ಮನವಿ ಮಾಡಿ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ಈ ಕುರಿತು ಮಹಿಳಾ ಕಾಂಗ್ರೆಸ್ 32 ಲಕ್ಷ ಸಹಿ ಸಂಗ್ರಹ ಮಾಡಿದೆ ಎಂದು ಅವರು ತಿಳಿಸಿದ್ದಾರೆ.


ರಾಜ್ಯಸಭೆಯಲ್ಲಿ ಮಾರ್ಚ್ 9, 2010 ರಲ್ಲೇ ಮಹಿಳಾ ಮೀಸಲಾತಿ ವಿಧೇಯಕವನ್ನು ಮಂಡಿಸಲಾಗಿತ್ತು. ಆದರೆ ಅದು ಲೋಕಸಭೆಯಲ್ಲಿ ಇನ್ನೂ ಮಂಡನೆಯಾಗಿಲ್ಲ. 2014 ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೂ ಈ ವಿಧೇಯಕವನ್ನು ಅಂಗೀಕರಿಸುವುದಾಗಿ ಹೇಳಿತ್ತು ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಇದೀಗ ಮತ್ತೊಂದು ದರ ಏರಿಕೆಯ ಶಾಕ್!