Webdunia - Bharat's app for daily news and videos

Install App

5 ಲಕ್ಷ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದ್ದರೂ ರಾಜೀನಾಮೆ: ಸಚಿವ ಜಾರಕಿಹೋಳಿ

Webdunia
ಬುಧವಾರ, 25 ಜನವರಿ 2017 (15:24 IST)
ಐಟಿ ದಾಳಿ ವೇಳೆ ನನ್ನ ಮನೆಯಲ್ಲಿ 41 ಲಕ್ಷ ರೂಪಾಯಿ ಪತ್ತೆಯಾಗಿರುವ ಸಂಗತಿ ನಿಜವಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಕನಿಷ್ಠ 5 ಲಕ್ಷ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದ್ದರೂ ಸಹ ಸಚಿವ ಸ್ಥಾನ ಹಾಗೂ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ ಸವಾಲ್ ಎಸೆದಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಐಟಿ ದಾಳಿಯ ವೇಳೆ ಸಿಕ್ಕಿರುವುದು 41 ಸಾವಿರ ರೂಪಾಯಿ ಮಾತ್ರ. 41 ಲಕ್ಷ ಅಲ್ಲ.  ಒಂದು ವೇಳೆ 41 ಲಕ್ಷ ರೂಪಾಯಿ ಪತ್ತೆಯಾಗಿರುವ ಸಂಗತಿ ನಿಜವಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದರು. 
 
ಏಕಾಕಾಲಕ್ಕೆ ಬೆಳಗಾವಿಯ 16 ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಇಲಾಖೆಯ ಮೇಲೆ ವಿಶ್ವಾಸ ಇದೆ. ಆದರೂ, ಇಲ್ಲದ ಆಸ್ತಿ ಕುರಿತು ಏಕೆ ಪ್ರಚಾರವಾಗುತ್ತಿದೆ ಗೊತ್ತಿಲ್ಲವೆಂದು ಹೇಳಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನನ್ನ ರಾಜೀನಾಮೆ ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ. ಆದರೆ, ಈವರೆಗೂ ರಾಜೀನಾಮೆ ಕೇಳಿಲ್ಲ, ಕೇಳುವುದು ಇಲ್ಲ ಎಂದು ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments