Webdunia - Bharat's app for daily news and videos

Install App

ರುಚಿಯಾದ ಈರುಳ್ಳಿ ದೋಸೆ ಮಾಡುವುದು ಹೇಗೆ ಗೊತ್ತಾ…?

Webdunia
ಸೋಮವಾರ, 5 ಮಾರ್ಚ್ 2018 (07:54 IST)
ಬೆಂಗಳೂರು: ಬಿಸಿ ಬಿಸಿಯಾಗಿರುವ ಈರುಳ್ಳಿ ದೋಸೆ ಮಾಡುವುದು ಬಹಳ ಸುಲಭ. ಬೆಳಿಗ್ಗೆ ಅಥವಾ ಸಂಜೆ ಹೊತ್ತಿಗೆ ತಿನ್ನುವುದಕ್ಕೆ ಇದು ಹೇಳಿ ಮಾಡಿಸಿದ ದೋಸೆ.


ಸಾಮಗ್ರಿಗಳು
1. ದೋಸೆ ಹಿಟ್ಟು -                   1 ಕಪ್
2. ಈರುಳ್ಳಿ -                                         2
3. ಹಸಿಮೆಣಸಿನ ಕಾಯಿ -                          3
4. ಕರಿಬೇವು -                                       ಸ್ವಲ್ಪ
5. ಕೊತ್ತಂಬರಿ ಸೊಪ್ಪು -                           ಸ್ವಲ್ಪ
6. ತುರಿದ ಕ್ಯಾರೇಟ್ -                              ಸ್ವಲ್ಪ
7. ಉಪ್ಪು  -                                           ಸ್ವಲ್ಪ
8. ಎಣ್ಣೆ -                                             ಸ್ವಲ್ಪ


ಮಾಡುವ ವಿಧಾನ: ಹುಳಿ ಬರಿಸಿದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ ಕ್ಯಾರೆಟ್, ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಹಾಕಿ. ದೋಸೆ ಹೆಂಚು ಬಿಸಿ ಮಾಡಿ, ಸ್ವಲ್ಪ ಎಣ್ಣೆ ಸವರಿ. ಹೆಂಚು ಕಾದ ಮೇಲೆ ದಪ್ಪವಾಗಿ ದೋಸೆ ಹುಯ್ಯಿರಿ. ಸುತ್ತಲೂ ಎಣ್ಣೆ ಹಾಕಿ ಹದವಾದ ಉರಿಯಲ್ಲಿ ಎರಡೂ ಕಡೆ ಬೇಯಿಸಿದರೆ ಈರುಳ್ಳಿ ದೋಸೆ ಸವಿಯಲು ಸಿದ್ಧ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಬೇಸಿಗೆಯಲ್ಲಿ ಪುನರ್ಪುಳಿ ಜ್ಯೂಸ್ ಕುಡಿಯಿರಿ

ವಿಶ್ವ ಲಿವರ್ ಆರೋಗ್ಯ ದಿನ: ಈ ಲಕ್ಷಣ ಕಂಡುಬಂದರೆ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ

ಈ ಕಾಲದಲ್ಲಿ ಹೃದ್ರೋಗದ ಅಪಾಯ ಹೆಚ್ಚು ಯಾಕೆ ತಿಳಿಯಿರಿ

ಉದ್ದನೆಯ ಉಗುರು ಬೇಕಾ? ಹಾಗಿದ್ದರೆ ಈ ಟಿಪ್ಸ್ ಫಾಲೋ ಮಾಡಿ

ಮುಂದಿನ ಸುದ್ದಿ
Show comments