Webdunia - Bharat's app for daily news and videos

Install App

ಸೆನ್ಸೆಕ್ಸ್: ಕೊನೆಗೂ 28 ಸಾವಿರ ಗಡಿ ದಾಟಿದ ಶೇರು ಸಂವೇದಿ ಸೂಚ್ಯಂಕ

Webdunia
ಬುಧವಾರ, 24 ಆಗಸ್ಟ್ 2016 (18:03 IST)
ಅಮೆರಿಕದ ರಿಸರ್ವ್ ಬ್ಯಾಂಕ್ ಬಡ್ಡಿ ದರಗಳ ಏರಿಕೆ ಘೋಷಿಸಿದ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 70 ಪಾಯಿಂಟ್‌ಗಳ ಚೇತರಿಕೆಯೊಂದಿಗೆ ಮುಕ್ತಾಯಗೊಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 4.67 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 69.73 ಪಾಯಿಂಟ್‌ಗಳ ಏರಿಕೆ ಕಂಡು 28,059.94 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 17.70 ಪಾಯಿಂಟ್‌ಗಳ ಏರಿಕೆ ಕಂಡು  8,650.30 ಅಂಕಗಳಿಗೆ ತಲುಪಿದೆ.  
 
ಇನ್ಫೋಸಿಸ್, ಎನ್‌ಟಿಪಿಸಿ, ಸನ್‌ ಫಾರ್ಮಾ, ಪಿಐಎಲ್, ಒಎನ್‌ಜಿಸಿ, ಡಾ,ರೆಡ್ಡಿ, ಎಚ್‌ಡಿಎಫ್‌ಸಿ ಬ್ಯಾಂಕ್, ಎಚ್‌ಡಿಎಫ್‌ಸಿ ಲಿಮಿಟೆಡ್, ಎಕ್ಸಿಸ್ ಬ್ಯಾಂಕ್, ವಿಪ್ರೋ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ. 
 
ಜಪಾನ್‌ನ ನಿಕೈ ಸೂಚ್ಯಂಕ ಶೇ.0.61 ರಷ್ಟು ಏರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.77 ರಷ್ಟು ಕುಸಿತ ಕಂಡಿದೆ. ಶಾಂಘೈ ಶೇರುಪೇಟೆ ಕೂಡಾ ಶೇ.0.12 ರಷ್ಟು ಇಳಿಕೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments